2024ರ ಲೋಕಸಭಾ ಚುನಾವಣಾ ಪ್ರಯುಕ್ತ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮಂಡಲ ವತಿಯಿಂದ
ಏಪ್ರಿಲ್ 16, 2024ರ ಮಂಗಳವಾರದಂದು ಕೆ.ಜಿ ಕಲ್ಲನಗೌಡರ ಹೊಲದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪನವರು ಬಳ್ಳಾರಿ ವಿಜಯನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಿ.ಶ್ರೀರಾಮುಲು ಅವರ ಪರವಾಗಿ ಮತಯಾಚನೆ ಮಾಡಿದರು.

ಈ ಸಂಧರ್ಭದಲ್ಲಿ ವಿಜಯನಗರ ಜಿಲ್ಲಾಧ್ಯಕ್ಷರಾದ ಶ್ರೀ ಚನ್ನಬಸವನಗೌಡ ಪಾಟೀಲ್, ಲೋಕಸಭಾ ಚುನಾವಣೆಯ ಉಸ್ತವಾರಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಎನ್ ರವಿಕುಮಾರ್, ಚಂದ್ರಶೇಖರ್ ಪಾಟೀಲ್ ಹಲಗೇರಿ, ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರ ಹನುಮಂತು ಮತ್ತು ಶ್ರೀಮತಿ ಅರುಣಾ ಲಕ್ಷ್ಮಿ ಜನಾರ್ಧನ್ ರೆಡ್ಡಿ, ರಾಜ್ಯ ಪದಾಧಿಕಾರಿಗಳು ,ಜಿಲ್ಲಾ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ಮಂಡಲದ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು, ಹಿರಿಯ ಮುಖಂಡರು, ಪ್ರಮುಖರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.

Share Now