ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರು ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಹಾಗೂ ಬಾಂಗ್ಲಾದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಹೇಳಿಕೆ ಮತ್ತು ದುರುದ್ದೇಶ ಪೂರ್ವಕವಾದ ಪ್ರಚೋದನಾತ್ಮಕ ಹೇಳಿಕೆ ನೀಡಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ವಿಜಯನಗರ ಜಿಲ್ಲಾ ಹೊಸಪೇಟೆ ತಾಲ್ಲೂಕು ಬಿಜೆಪಿ ಮಂಡಲದ ವತಿಯಿಂದ ಐವನ್ ಡಿಸೋಜ ವಿರುದ್ಧ ಪ್ರತಿಭಟನೆ ಹಾಗೂ ಡಿಸೋಜ್ ಅವರ ದೇಹದ ಪ್ರತಿಕೃತಿಯನ್ನು ದಹನ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಕಿಚಿಡಿ ಕೊಟ್ರೇಶ್, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ದೇವಲಾಪುರ, ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷರಾದ ಎಚ್ ರಾಘವೇಂದ್ರ, ಕಾರ್ಯಾಲಯ ಕಾರ್ಯದರ್ಶಿಯಾದ ಹೊನ್ನೂರಪ್ಪ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರೇವಣ್ಣ ಸಿದ್ದಪ್ಪ, Obc ಮೋರ್ಚಾ ಅಧ್ಯಕ್ಷರಾದ ಬಸವರಾಜ್ ಗೌಳಿ, ಮಧುರ ಚೆನ್ನಶಾಸ್ತ್ರೀ, ಶಶಿಕುಮಾರ್, ತಿರುಮಲೇಶ್ ಹಾಗೂ ರಾಜ್ಯ ಮತ್ತು ಜಿಲ್ಲಾ ಹಾಗೂ ಹೊಸಪೇಟೆ ಮಂಡಲದಿಂದ ಆಯ್ಕೆಯಾದ ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share Now